ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ – ನುಡಿದಂತೆ ನಡೆದಿದ್ದೇವೆ,;ಸಿಎಂ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಹಾಗೂ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ಚಾಲನೆ ದೊರೆತಿದೆ. ಇದೇ ವೇಳೆ ನೂರು ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಸಾಧನೆಯನ್ನ ಕೈಪಿಡಿ ಮೂಲಕ ಹೊರತರಲಾಗಿದೆ. ಗೃಹಲಕ್ಷ್ಮಿ ಯೋಜನೆ ಚಾಲನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ,ಈ ಹಿಂದೆ 165 ಭರಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನ ಮತ್ತೊಮ್ಮೆ ಸಾಬೀತು ಮಾಡಿದೆ. ಈ ಬಾರಿಯೂ ಕಾಂಗ್ರೆಸ್ ಸರ್ಕಾರ ನೀಡಿದ ಎಲ್ಲ ಭರವಸೆಗಳನ್ನು 5 ವರ್ಷಗಳಲ್ಲಿ ಈಡೇರಿಸುತ್ತೇವೆ ಎನ್ನುವ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *