ವಿಶ್ವ ಯೋಗ ದಿನದ ಹಿನ್ನೆಲೆಯಲ್ಲಿ ವೀಡಿಯೋ ಸಂದೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿ ಆಗುತ್ತದೆ. ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯಿಂದ ಇಡೀ ವಿಶ್ವವೇ ಒಂದಾಗಿದೆ ಯೋಗ ದಿನಾಚರಣೆಗೆ ಭಾರತ ಕರೆ ನೀಡಿತ್ತು. ಭಾರತ ಕರೆ ನೀಡಿದಂತೆ ವಿಶ್ವದ ಹಲವು ದೇಶಗಳಲ್ಲಿ ಯೋಗ ಮಾಡಲಾಗುತ್ತಿದೆ. ಇಂದು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ 9ನೇ ಯೋಗ ದಿನಾಚರಣೆಯ ನೇತೃತ್ವವನ್ನು ಮೋದಿ ವಹಿಸಲಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 5:25 ರಿಂದ 6:30ರ ಅವಧಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. 180ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ.ಇದಾದ ಬಳಿಕ ಅವರು ರಾತ್ರಿ 8 ಗಂಟೆಗೆ ವಾಷಿಂಗ್ಟನ್ ಡಿಸಿಗೆ ಪ್ರಯಾಣ ಮಾಡಲಿದ್ದಾರೆ. ವಾಷಿಂಗ್ಟನ್ ಡಿಸಿ ತಲುಪಿದ ಬಳಿಕ ಅಮೇರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡೆನ್ ಅವರು ಆಯೋಜಿಸಿರುವ ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ.