ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಕಾಂಗ್ರೆಸ್‌ಪ್ರಣಾಳಿಕೆ ಬಿಡುಗಡೆ ಮಾಡಿತು. ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳ ಸಂಘಟನೆಯನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ಪ್ರಣಾಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳ ಆಕ್ರೋಶ ಹೊರಹಾಕಿವೆ. ಇದೇ ಹೊತ್ತಿನಲ್ಲಿ ಬಜರಂಗದಳ ಸಂಘಟನೆ ಬಗ್ಗೆ ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್‌ಬಘೇಲ್‌ಪ್ರತಿಕ್ರಿಯಿಸಿದ್ದಾರೆ. ಎರಡೂ ರಾಜ್ಯಗಳಲ್ಲಿನ ಪರಿಸ್ಥಿತಿಗಳು ವಿಭಿನ್ನವಾಗಿರುವ ಕಾರಣ ಕರ್ನಾಟಕದಲ್ಲಿ ತೆಗೆದುಕೊಂಡ ನಿರ್ಧಾರಗಳು ಛತ್ತೀಸಗಢಕ್ಕೆ ಅನ್ವಯಿಸುವುದಿಲ್ಲ. ಬಜರಂಗಿಗಳು ಇಲ್ಲಿ ಕೆಲವು ಗೊಂದಲಗಳನ್ನು ಉಂಟುಮಾಡಿದರು. ಅವೆಲ್ಲವನ್ನು ನಾವು ಸರಿಪಡಿಸಿದ್ದೇವೆ.ಕರ್ನಾಟಕ ಕಾಂಗ್ರೆಸ್‌ನ ನಿರ್ಧಾರಗಳು ಛತ್ತೀಸಗಢಕ್ಕೂ ಅನ್ವಯಿಸುವ ಅಗತ್ಯವಿಲ್ಲ. ಒಂದು ವೇಳೆ ಅಗತ್ಯವೆನಿಸಿದರೆ ಆಲೋಚಿಸಿ ಕ್ರಮಕೈಗೊಳ್ಳುತ್ತೇವೆ. ನಮ್ಮ ನಾಯಕರು ಮತ್ತು ಪಕ್ಷದ ಪದಾಧಿಕಾರಿಗಳು ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.