ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ಹಿಂಪಡೆಯಲಾದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್ 12 ಮತ್ತು 13 ರಂದು ರಾಹುಲ್ ಗಾಂಧಿ ತಮ್ಮ ಸಂಸತ್ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ಸೋಮವಾರ ಅವರು ಸಂಸತ್ ಭವನಕ್ಕೆ ತೆರಳಿ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿದರು. ಅವರಿಗೆ ಇಂಡಿಯಾ ಒಕ್ಕೂಟದ ಸಂಸದರು ಭವ್ಯ ಸ್ವಾಗತ ಕೋರಿದರು.