ಅನುದಾನಿತ ಕಾಲೇಜು ಉಪನ್ಯಾಸಕರಿಗೆ ರಾಷ್ಟ್ರೀಯ ಪಿಂಚಣಿ ಜಾರಿಗೆ ಬಗ್ಗೆ ನ್ಯಾಯ ಸಮ್ಮತ ಕ್ರಮ: ಸಿಎಂ

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್, ಅನುದಾನಿತ ಶಿಕ್ಷಕರಿಗೆ ಹಳೆ ಅಥವಾ ಹೊಸ ಪಿಂಚಣಿ ವ್ಯವಸ್ಥೆ ಕೊಡಬೇಕು. ನಿನ್ನೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಸಿಎಂ, 2006ಕ್ಕೂ ಮೊದಲು ನೇಮಕ ಆಗಿರುವ ಉಪನ್ಯಾಸಕರಿಗೆ ಹಳೆ ಪಿಂಚಣೆ ಕೊಡುತ್ತೇವೆ. ನಂತರ ನೇಮಕಾತಿಯಾದವರಿಗೆ ಎನ್‍ಪಿ.ಎಸ್. ಕೊಡಲಾಗುತ್ತದೆ. ಅನುದಾನಿತ ಕಾಲೇಜುಗಳ ಉಪನ್ಯಾಸಕರಿಗೂ ರಾಷ್ಟ್ರೀಯ ಪಿಂಚಣಿಗೆ 15 ಪರ್ಸೆಂಟ್ ಮ್ಯಾನೇಜ್ ಮೆಂಟ್ ಕೊಡಬೇಕು ಯೋಜನೆ ಕೊಡುವ ಬಗ್ಗೆ ನ್ಯಾಯ ಸಮ್ಮತವಾಗಿ ತೀರ್ಮಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *