ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ತಾರತಮ್ಯ ಮಾಡಲು ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಹಣಕಾಸು ಆಯೋಗದ ಶಿಫಾರಸು ಆಧರಿಸಿ ರಾಜ್ಯಗಳಿಗೆ ಅನುದಾನ ನೀಡಲಾಗುತ್ತಿದೆ. ಜಿಎಸ್‌ಟಿ ಅದರಲ್ಲೂ ರಾಜ್ಯಗಳ ಪಾಲಿನ ಜಿಎಸ್‌ಟಿಯನ್ನು ನೂರಕ್ಕೆ ನೂರರಷ್ಟು ರಾಜ್ಯಗಳಿಗೆ ನೀಡಲಾಗುತ್ತಿದೆ. ಆಯೋಗದ ಶಿಫಾರಸು ಉಲ್ಲಂಘಿಸಿ ರಾಜ್ಯಗಳ ನಡುವೆ ತಾರತಮ್ಯ ಮಾಡಲು ಸಾಧ್ಯವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಹೇಳಿದ್ದಾರೆ.ತೆರಿಗೆ ಅನ್ಯಾಯ ಪ್ರಶ್ನಿಸಿ ಕರ್ನಾಟಕ ರಾಜ್ಯ ಸರ್ಕಾರದ ಪ್ರತಿಭಟನೆಯನ್ನು ಉಲ್ಲೇಖಿಸಿದ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲವು ರಾಜ್ಯಗಳು ಮಾಡುತ್ತಿರುವ ತೆರಿಗೆ ತಾರತಮ್ಯ ರಾಜಕೀಯವಾಗಿ ದೂಷಣೆಯಾಗಿದ್ದು, ಇದು ಸತ್ಯವಲ್ಲ. ಕೇಂದ್ರ ಹಣಕಾಸು ಆಯೋಗದ ಶಿಫಾರಸು ಅನ್ವಯ ಅನುದಾನ ನೀಡುತ್ತಿದೆ ಎಂದರು. ಹಣಕಾಸು ಆಯೋಗವು ಎಲ್ಲಾ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ಶಿಫಾರಸು ಮಾಡುತ್ತದೆ. ಇದು ರಾಜ್ಯ ಸರ್ಕಾರಗಳಿಗೂ ಗೊತ್ತು. ಈ ಸತ್ಯಾಂಶ ಬಿಟ್ಟು ರಾಜಕೀಯ ಆರೋಪ ಮಾಡಲಾಗುತ್ತಿದೆ ಎಂದರು. ಮುಂದುವರಿದು ಬೇಕಾಬಿಟ್ಟಿ ಹಣ ಖರ್ಚು ಮಾಡಿ ನಿಮ್ಮ ರಾಜ್ಯದ ಬಜೆಟ್ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಕೇಂದ್ರ ಸರ್ಕಾರವನ್ನು ದೂಷಿಸಬೇಡಿ ಎಂದು ಕಿಡಿಕಾರಿದರು.

Leave a Reply

Your email address will not be published. Required fields are marked *