ಕೇಂದ್ರ ಒಪ್ಪಿದರೆ ಅನ್ನಭಾಗ್ಯ ಯೋಜನೆ ಸ್ಥಗಿತಗೊಳಿಸಲಾಗುವುದು ಎಂಬ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದು, ಉಮೇಶ್ಕತ್ತಿಯವರೇ, ಬಡವರ ಹೊಟ್ಟೆಗೆ ಹೊಡೆಯುವ ನಿಮ್ಮ ದುಷ್ಟತನದ ಕತ್ತಿಯನ್ನು ಒರೆಯಲ್ಲಿಟ್ಟುಬಿಡಿ. ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೂ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ, ಎಚ್ಚರ ಇರಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.