ಬೆಂಗಳೂರಿನಲ್ಲಿ ತಮ್ಮ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಅಕ್ಕಿ ಬದಲಿಗೆ ದುಡ್ಡನ್ನು ಜುಲೈ 1ರಂದೇ ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು. ಜುಲೈ 10ರ ನಂತರ ಹಣ ಹಾಕುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.ಇನ್ನೂ ಗೃಹಜ್ಯೋತಿ ಯೋಜನೆಯ ಕುರಿತು ಮಾತಾಡಿದ ಸಿಎಂ, ಗೃಹಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಬಿಲ್‌ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದೆ, ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿರುವ ಬಗ್ಗೆ ಮಾತನಾಡಿ, ವಿರೋಧ ಪಕ್ಷ ಅವರ ಒಳಜಗಳವನ್ನು ಮೊದಲು ಸರಿಪಡಿಸಿಕೊಳ್ಳಲಿ ಎಂದು ಕುಟುಕಿದ್ದಾರೆ.