ಅಫ್ಘಾನಿಸ್ತಾನದ ಇಸ್ಲಾಮಿಕ್ ಧಾರ್ಮಿಕ ಶಾಲೆ ಅಲ್ ಜಿಹಾದ್ ಮದರಸಾದಲ್ಲಿ ಮದರಸಾದಲ್ಲಿ ಬಾಂಬ್ ಸ್ಫೋಟ – 19 ಸಾವು, 24 ಮಂದಿಗೆ ಗಾಯ

ಅಫ್ಘಾನಿಸ್ತಾನದ ಉತ್ತರ ನಗರವಾದ ಐಬಕ್‌ನಲ್ಲಿರುವ ಇಸ್ಲಾಮಿಕ್ ಧಾರ್ಮಿಕ ಶಾಲೆ ಅಲ್ ಜಿಹಾದ್ ಮದರಸಾದಲ್ಲಿ ಬುಧವಾರ ಬಾಂಬ್ ಸ್ಫೋಟಗೊಂಡಿದೆ ಮೃತರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ 19 ಜನರು ಸಾವನ್ನಪ್ಪಿದ್ದಾರೆ ಮತ್ತು 24 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಕಳೆದ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಅಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ಸಾಕಷ್ಟು ಬಾರಿ ಸ್ಫೋಟಗಳು ಹಾಗೂ ದಾಳಿಗಳನ್ನು ನಡೆಸಲಾಗಿದೆ.

Leave a Reply

Your email address will not be published. Required fields are marked *