ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದಾಗಿನಿಂದಲೂ ಮಹಿಳೆಯರ ಹಕ್ಕುಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ತಾಲಿಬಾನ್, ಮುಂದಿನ ಸೂಚನೆ ಬರುವವರೆಗೂ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ಅಮಾನತುಗೊಳಿಸುವಂತೆ ಸೂಚನೆ ನೀಡಿದೆ. ಈಗಾಗಲೇ ಉದ್ಯಾನಗಳಲ್ಲೂ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ. ಅಷ್ಘಾನಿಸ್ತಾನ ವಶಪಡಿಸಿಕೊಂಡ ಬಳಿಕ ನೀಡಿದ್ದ ಸೌಮ್ಯ ಆಡಳಿತ ಹಾಗೂ ಅಲ್ಪಸಂಖ್ಯಾತ ಹಕ್ಕುಗಳ ಭರವಸೆಯ ಹೊರತಾಗಿಯೂ ತಾಲೀಬಾನ್‌ಷರಿಯಾ ಕಾನೂನನ್ನು ದೇಶದಲ್ಲಿ ವ್ಯಾಪಕವಾಗಿ ಜಾರಿಗೊಳಿಸಿದೆ.