ವಿದೇಶಾಂಗ ಸಚಿವ ಎಸ್.ಜೈಶಂಕರ್‌ಅವರು ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯ ಸ್ಥಳಕ್ಕೆ ಭೇಟಿ ನೀಡಿ ʼಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ ಇದುʼ ಎಂದು ಟ್ವೀಟ್‌ಮಾಡಿರುವ ಜೈಶಂಕರ್, ಗಣೇಶ ಚತುರ್ಥಿಯಂದು ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ. ತ್ವರಿತ ಪ್ರಗತಿಯನ್ನು ನೋಡಲು ಸಂತೋಷವಾಗಿದೆ. ದೇವಾಲಯ ನಿರ್ಮಾಣ ಜವಾಬ್ದಾರಿ ಹೊತ್ತಿರುವ BAPS ತಂಡ, ಭಕ್ತರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಸಂತೋಷವಾಯಿತು 55,000 ಚದರ ಮೀಟರ್ ಜಾಗದಲ್ಲಿ ದೇವಾಲಯ ನಿರ್ಮಾಣವಾಗಲಿದೆ. ಈ ರಚನೆಯನ್ನು ಭಾರತೀಯ ದೇವಾಲಯದ ಕುಶಲಕರ್ಮಿಗಳ ಕೈಯಿಂದ ಸಾಂಪ್ರದಾಯಿಕ ದೇವಾಲಯವಾಗಲಿದೆ. ಅಬುಧಾಬಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಹಿಂದೂ ದೇವಾಲಯ ಇದಾಗಿದೆ.