ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಸಚಿವ ನಾರಾಯಣ ಗೌಡ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಎಂಬ ಸುದ್ದಿ ಹಬ್ಬಿತ್ತು. ಇತ್ತೀಚೆಗಷ್ಟೇ ಕಾಂಗ್ರೆಸ್‌ಗೆ ಸೇರುವ ಸುಳಿವು ನೀಡಿದ್ದ ನಾರಾಯಣಗೌಡ ಇದೀಗ ಮತ್ತೆ ಬಿಜೆಯಲ್ಲೇ ಇರಲಿದ್ದಾರೆ. ಹೌದು! ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ನಾರಾಯಣಗೌಡರು ಕೆ.ಆರ್.ಪೇಟೆಯಿಂದ ಬಿಜೆಪಿಯಿಂದಲ್ಲೇ ಸ್ಪರ್ಧೆ ಮಾಡ್ತಾರೆ. ಅಮಿತ್ ಶಾ ಭೇಟಿ ಬಳಿಕ ನಿನ್ನೆ ಬಿ.ಎಸ್.ಯಡಿಯೂರಪ್ಪನವರನ್ನೂ ಸಹ ನಾರಾಯಣ ಗೌಡ ಭೇಟಿಯಾಗಿದ್ದು, ಯುಗಾದಿ ಶುಭಾಶಯ ಹೇಳಿ ಬಂದಿದ್ದಾರೆ. ಇಂದು ತಮ್ಮ ಇಲಾಖೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆ ನಾರಾಯಣ ಗೌಡ ಪಾಲ್ಗೊಳ್ಳುತ್ತಿದ್ದಾರೆ.