ರಾಮ ಮಂದಿರ ಉದ್ಘಾಟನೆ ದಿನಾಂಕ ಘೋಷಣೆ. ಜನವರಿ 1, 2024ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ ಎಂದು ಅಮಿತ್ ಶಾ, ತ್ರಿಪುರ ಹಾಗೂ ಮೇಘಾಲಯ ಚುನಾವಣಾ ಪ್ರಚಾರದಲ್ಲಿ ಹೇಳಿದ್ದರು. ಇಂದು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಮಿತ್ ಶಾ ರಾಜಕಾರಣಿ, ಪೂಜಾರಿಯಲ್ಲ. ದೇಶವನ್ನು ಕಾಪಾಡುವುದು ನಿಮ್ಮ ಕರ್ತವ್ಯ. ರೈತರಿಗೆ ಬೆಂಬಲ ಬೆಲೆ ನೀಡುವುದು ನಿಮ್ಮ ಕೆಲಸ. ಇದರ ಬದಲು ಅಮಿತ್ ಶಾ ದೇವಸ್ಥಾನ ಉದ್ಘಾಟನೆ ಘೋಷಣೆ ಮಾಡುವದಲ್ಲ. 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ನೀಡಿದ್ದ ಬಿಜೆಪಿ ಇದೀಗ ಮರೆತಿದೆ. ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ರಾಮ ಮಂದಿರ ಉದ್ಘಾಟನೆ ಕುರಿತು ಹೇಳಿಕೆ ನೀಡುವ ಮೂಲಕ ದೇಶದ ಜನರ ಗಮನ ಬೇರೆಡೆಗೆ ಸೆಳೆಯುತ್ತಿದೆ.