ಅಮೆರಿಕದಲ್ಲಿ ಗುಂಡಿನ ದಾಳಿಯ ಪ್ರಕರಣಗಳು ಒಂದಾದಮೇಲೊಂದರಂತೆ ವರದಿಯಾಗುತ್ತಲೇ ಇವೆ. ಮಂಗಳವಾರ ಕ್ಯಾಲಿಫೋರ್ನಿಯಾದಲ್ಲಿ ಮತ್ತೆ ಗುಂಡಿನ ದಾಳಿಗಳು ನಡೆದಿವೆ. ಹಾಫ್ ಮೂನ್ ಬೇ ನಗರದಲ್ಲಿ ನಡೆದ 2 ಪ್ರತ್ಯೇಕ ದಾಳಿಗಳಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಪೊಲೀಸರು ಈಗಾಗಲೇ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಆತನನ್ನು ಝಾವೋ ಚುನ್ಲಿ (67) ಎಂದು ಗುರುತಿಸಲಾಗಿದೆ. ಆತ ಗುಂಡಿನ ದಾಳಿ ನಡೆಸಿ, ಪರಾರಿಯಾಗಲು ಪ್ರಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ಆತನನ್ನು ಹಿಡಿದು ಬಂಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ