ಅಮೆರಿಕಾದ ಜನಸಂಖ್ಯೆಯಲ್ಲಿ ಭಾರತೀಯ ಸಮೂದಾಯದ ಪ್ರಮಾಣ ಶೇ.1ರಷ್ಟಿದ್ದು, 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಬೈಡನ್ ಸಮೂದಾಯಕ್ಕೆ ನೀಡಿದ್ದ ಭರವಸೆಯನ್ನು ಪೂರೈಸಿದ್ದಾರೆ. ಈ ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೇತೃತ್ವದ ಸರ್ಕಾರದಲ್ಲಿ 80ಕ್ಕೂ ಇಂಡೋ ಅಮೆರಿಕರಿದ್ದರೆ, ಬರಾಕ್ ಒಬಾಮಾ ಅಧ್ಯಕ್ಷರಾಗಿದ್ದಾಗ 60ಕ್ಕೂ ಅಧಿಕ ಇಂಡೋ ಅಮೆರಿಕರನ್ನು ನೇಮಿಸಿದ್ದರು. ಈ ಮೂಲಕ ಹಿಂದಿನ 2 ಅಧ್ಯಕ್ಷರ ದಾಖಲೆಯನ್ನು ಮುರಿದಿದ್ದಾರೆ. ಬೈಡನ್ ನೇತೃತ್ವದ ಸರ್ಕಾರದಲ್ಲಿ 130ಕ್ಕೂ ಅಧಿಕ ಇಂಡೋ ಅಮೆರಿಕನ್ನರು ಕೆಲಸ ಮಾಡುತ್ತಿದ್ದಾರೆ. ಯುಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ನಲ್ಲಿ ನಾಲ್ವರು ಸೇರಿದಂತೆ ವಿವಿಧ ರಾಜ್ಯ ಮತ್ತು ಫೆಡರಲ್ ಹಂತಗಳಲ್ಲಿ 40ಕ್ಕೂ ಅಧಿಕ ಇಂಡೋ ಅಮೆರಿಕನ್ನರು ಚುನಾಯಿತರಾಗಿದ್ದಾರೆ. ಅಮೆರಿಕಾ ಮೂಲದ ಜಾಗತಿಕ ಸಂಸ್ಥೆಯಾದ ಇಂಡಿಯಾಸ್ಪೊರಾ ಸಂಸ್ಥೆಯ ಮುಖ್ಯಸ್ಥ ಹಾಗೂ ಸಂಸ್ಥಾಪಕ ಎಂ.ಆರ್.ರಂಗಸ್ವಾಮಿ ಈ ಬಗ್ಗೆ ತಿಳಿಸಿದರು.