ಅಮೆರಿಕದ ಶಸ್ತ್ರಾಸ್ತ್ರಗಳನ್ನು ಹೊತ್ತ ಮೊದಲ ವಿಮಾನವು ದಕ್ಷಿಣ ಇಸ್ರೇಲ್‌ಗೆ ಬಂದಿಳಿದಿದೆ – ಇಸ್ರೇಲ್‌ಗೆ ನೂರಾನೆ ಬಲ

ಇಸ್ರೇಲ್‌ಮೇಲೆ ನಡೆಯುತ್ತಿರುವ ಹಮಾಸ್‌ಉಗ್ರರ ಅಟ್ಟಹಾಸವನ್ನು ಹತ್ತಿಕ್ಕಲು ಭಾರೀ ಶಸ್ತ್ರಾಸ್ತ್ರಗಳನ್ನು ಹೊತ್ತ ಯುಎಸ್‌ಮೊದಲ ವಿಮಾನವು ದಕ್ಷಿಣ ಇಸ್ರೇಲ್‌ನ ನೆವಾಟಿಮ್ ವಾಯುನೆಲೆಗೆ ಬಂದಿಳಿದಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿಕೊಂಡಿದೆ. ಆದ್ರೆ ಯಾವೆಲ್ಲಾ ಮಿಲಿಟರಿ ಉಪಕರಣಗಳನ್ನು ಬಹಿರಂಗಪಡಿಸಿಲ್ಲ. ಈ ಕುರಿತು ಮಾತನಾಡಿರುವ ಯುಎಸ್‌ಅಧ್ಯಕ್ಷ ಜೋ ಬೈಡನ್‌ಇಸ್ರೇಲ್ ಅನ್ನು ನಿರ್ನಾಮ ಮಾಡುವುದು ಹಾಗೂ ಯಹೂದಿ ಜನರನ್ನು ಕೊಲ್ಲುವುದೇ ಹಮಾಸ್‌ನ ಉದ್ದೇಶವಾಗಿದೆ. ಇಸ್ರೇಲ್ ಹಾಗೂ ಹಮಾಸ್ ಸಂಘರ್ಷದಲ್ಲಿ ಇಲ್ಲಿಯವರೆಗೆ 14 ಜನ ಅಮೆರಿಕನ್ನರು ಸಾವನ್ನಪ್ಪಿದ್ದಾರೆ. ಇಸ್ರೇಲ್‌ನಲ್ಲಿ ಸುಮಾರು 1,000 ನಾಗರಿಕರ ಹತ್ಯೆಯಾಗಿದೆ.ಹಮಾಸ್ ಶನಿವಾರ ಇಸ್ರೇಲ್ ಮೇಲೆ ದಾಳಿ ಪ್ರಾರಂಭಿಸಿದ್ದು, ನೂರಾರು ಜನರನ್ನು ಕೊಂದಿದೆ. ಇದು ದಶಕದಲ್ಲಿಯೇ ಅತಿ ದೊಡ್ಡ ಹಿನ್ನಡೆಯಾಗಿದೆ. ಇಸ್ರೇಲ್ ಈ ದಾಳಿಗೆ ಪ್ರತಿಯಾಗಿ ಈಗಾಗಲೇ ಗಾಜಾದ ಮೇಲೆ ವೈಮಾನಿಕ ದಾಳಿ ನಡೆಸಿದೆ ಹಾಗೂ 800ಕ್ಕೂ ಅಧಿಕ ಜನರನ್ನು ಕೊಂದಿದೆ. ಈ ಪ್ರದೇಶದಲ್ಲಿ ಅಮೆರಿಕ ತನ್ನ ಮಿಲಿಟರಿ ಬಲವನ್ನು ಹೆಚ್ಚಿಸಿದೆ. ನಮ್ಮ ಆಡಳಿತವು ಇಸ್ರೇಲ್‌ಗೆ ಯುದ್ಧ ಸಾಮಗ್ರಿಗಳನ್ನ ಪೂರೈಕೆ ಮಾಡಿದೆ. ಇದು ಯುದ್ಧದ ಸಮಯದಲ್ಲಿ ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳುವ ಪ್ರಮುಖ ಭಾಗವೂ ಆಗಿದೆ. ಇಸ್ರೇಲ್‌ತನ್ನನ್ನು ತಾನು ರಕ್ಷಣೆ ಮಾಡಿಕೊಳ್ಳಲು ಅಮೆರಿಕೆ ಬೆಂಬಲಿಸುತ್ತಿದೆ ಎಂಬುದಾಗಿ ಹೇಳಿಕೊಂಡಿದ್ದಾರೆ. ಇಸ್ರೇಲ್‌ಪ್ರಧಾನಿ ಬೆಂಜಮಿನ್ ನೆತನ್ಯಾಹು, ಜೋ ಬೈಡನ್‌ಅವರೊಂದಿಗೆ 3ನೇ ಬಾರಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ನಿರಂತರ ಸಂಪರ್ಕದಲ್ಲಿದ್ದಾರೆ.

Leave a Reply

Your email address will not be published. Required fields are marked *