ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.ಈ ಸಂಬಂಧ ಸಿಎಂ ತಮ್ಮ ಎಕ್ಸ್‌ಖಾತೆಯಲ್ಲಿ ಬರೆದುಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರೇ ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ ಎಂದು ಸವಾಲು ಹಾಕಿದ್ದಾರೆ.