ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧ- ಯೋಗಿ ಸರ್ಕಾರದ ಮಹತ್ವದ ನಿರ್ಧಾರ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಭರ್ಜರಿ ತಯಾರಿಗಳು ನಡೆಯುತ್ತಿದೆ. ಈ ನಡುವೆ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮುನ್ನ ಯೋಗಿ ಆದಿತ್ಯನಾಥ್ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಉತ್ತರ ಪ್ರದೇಶದ ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಯೋಗಿ ಸರ್ಕಾರ ಘೋಷಿಸಿದೆ. ಅಲ್ಲದೇ ಈಗಾಗಲೇ ಇರುವಂತಹ ಮದ್ಯದಂಗಡಿಗಳನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗುವುದು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ನಂತರ ಉತ್ತರ ಪ್ರದೇಶದ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *