2024ರಲ್ಲಿ ನಡೆಯಬೇಕಿರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ತೆಲುಗುದೇಶಂ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹಾಗೂ ಪ್ರಸಿದ್ಧ ಚಿತ್ರ ನಟ ಪವನ್ಕಲ್ಯಾಣ್ಅವರ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆ ಗೋಚರಿಸಿದೆ. ಜನಸೇನಾ ಪಕ್ಷದ ನಾಯಕರಾಗಿರುವ ಪವನ್ಕಲ್ಯಾಣ್ಅವರು ಚಂದ್ರಬಾಬು ನಾಯ್ಡು ಮನೆಗೇ ತೆರಳಿ ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಉಭಯ ನಾಯಕರು ರಾಜ್ಯದ ಇತ್ತೀಚಿನ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ. ಈ ಹಿನ್ನೆಲೆ, ಮುಂಬರುವ ಚುನಾವಣೆಯಲ್ಲಿ ಟಿಡಿಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜನಸೇನಾ ಮುಂದಾಗುತ್ತಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.