ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. 19/20 ರಲ್ಲಿ ಬಾರಿ ಪ್ರವಾಹ ಬಂದಿತ್ತು. ಆಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ. ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ರಾಜ್ಯಕ್ಕೆ ವಿಶೇಷ ಅನುದಾನ ಕೊಡಲಿಲ್ಲ. ಆಕ್ಸಿಜನ್ ಇಲ್ಲದೇ ಸಾವಿರಾರು ಜನ ಸತ್ತರು. ಚಾಮರಾಜನಗರದಲ್ಲಿ 36 ಜನ ಸಾವನ್ನಪ್ಪಿದ್ದರು. ರಾಜ್ಯದ ಬೇರೆಡೆಯೂ ಆಕ್ಸಿಜನ್ ಇಲ್ಲದೆ ಸತ್ತರು. ಈಗ ಅವರಿಗೆ ರಾಜ್ಯದ ನೆನಪಾಗಿದೆ ಇದಕ್ಕೆಲ್ಲ ಯಾರು ಕಾರಣ ಇದೇ ಮೋದಿಯವರು. ಆಕ್ಸಿಜನ್ ಕೊಡುವುದಕ್ಕೆ ಆಗದವರು. ಈಗ ಯೋಗ ಮಾಡುವುದಕ್ಕೆ ಬಂದಿದ್ದಾರೆ. ಆಕ್ಸಿಜನ್ ಬಗ್ಗೆ ಪ್ರಧಾನಿಯವರು ಮಾತನಾಡಬೇಕು. ಎಂದು ಆಕ್ರೋಶ ಹೊರಹಾಕಿದ್ದಾರೆ.