ಆಮ್ ಆದ್ಮಿ ಪಕ್ಷವನ್ನು ಕೊನೆಗಾಣಿಸಲು ಪ್ರಯತ್ನಿಸಲಾಗುತ್ತಿದೆ. ಅದಕ್ಕಾಗಿ ಪಕ್ಷದ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ: ಕೇಜ್ರಿವಾಲ್ ಆರೋಪ

ಎಎಪಿ ಶಾಸಕ ಅಮಾನತುಲ್ಲಾ ಖಾನ್ ನಿವಾಸದ ಮೇಲೆ ಇಡಿ ದಾಳಿ ಅಂತ್ಯವಾದ ಬೆನ್ನಲ್ಲೆ ಅವರ ನಿವಾಸಕ್ಕೆ ತೆರಳಿದ ಸಿಎಂ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು. ಖಾನ್ ಸೇರಿದಂತೆ ಇತರ ಕೆಲವು ನಾಯಕರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತನಿಖೆ ನಡೆಸಲಾಗುತ್ತಿದೆ.ನಮ್ಮ ನಾಯಕರ ವಿರುದ್ಧ ಈವರೆಗೂ 170 ಪ್ರಕರಣಗಳು ದಾಖಲಾಗಿವೆ. ಆದರೆ ಅವುಗಳಲ್ಲಿ 140 ಪ್ರಕರಣಗಳಲ್ಲಿ ತೀರ್ಪುಗಳು ನಮ್ಮ ಪರವಾಗಿವೆ. ಕಳೆದ ಕೆಲವು ತಿಂಗಳುಗಳಲ್ಲಿ ನಮ್ಮ ಹಿರಿಯ ನಾಯಕರು ಹಾಗೂ ಸಚಿವರನ್ನು ಬಂಧಿಸಲು ಆರಂಭಿಸಿದ್ದಾರೆ. ಈ ದಾಳಿಗಳು ಎಎಪಿಯನ್ನು ಕೊನೆಗೊಳಿಸುವ ಅಭಿಯಾನದ ಭಾಗವಾಗಿದೆ.ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಡಿ ಅಥವಾ ಕೇಂದ್ರೀಯ ತನಿಖಾ ದಳ ಯಾವುದೇ ವಿಚಾರಣೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಕೇಜ್ರಿವಾಲ್, ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುವುದಲ್ಲ. ಆದರೆ ಅದರ ಹೆಸರಿನಲ್ಲಿ ವಿರೋಧ ಪಕ್ಷದ ನಾಯಕರಿಗೆ ತೊಂದರೆ ನೀಡುತ್ತದೆ. ಮೋದಿಯವರಿಂದ ಭ್ರಷ್ಟರೆಂದು ಕರೆಸಿಕೊಂಡವರು ಈಗ ಬಿಜೆಪಿಯ ಭಾಗವಾಗಿದ್ದಾರೆ. ಇದನ್ನು ನಾವು ನೋಡಿದ್ದೇವೆ. ಅವರು ವಿರೋಧ ಪಕ್ಷಗಳ ಭ್ರಷ್ಟರನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡಿದ್ದಾರೆ. ಆಪ್ ದೇಶಭಕ್ತರ ಪಕ್ಷ ಎಂದು ಪುನರುಚ್ಚರಿಸಿದ ಕೇಜ್ರಿವಾಲ್, ದೇಶದಲ್ಲಿ ಭಯದ ವಾತಾವರಣವಿದೆ ಎಂದು ಹೇಳಿದ್ದರು. ಜನರು ಭಾರತವನ್ನು ಬಿಟ್ಟು ಬೇರೆ ದೇಶಗಳಿಗೆ ಹೋಗುತ್ತಿದ್ದಾರೆ ಎಂದು ಆರೋಪಿಸಿದರು.

Leave a Reply

Your email address will not be published. Required fields are marked *