75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಕ್ಕೆ ಆಗಮಿಸಿ, ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಬಿಜೆಪಿಯವರು ಸ್ವಾತಂತ್ರ ಫಲಾನುಭವಿಗಳು ಅಷ್ಟೇ. ಬಿಜೆಪಿಯವರು ತಿರಂಗ ಧ್ವಜವನ್ನೇ ವಿರೋಧಿಸಿದ್ದರು. ಅದರೆ ಈಗ ಹರ್ ಘರ್ ತಿರಂಗ ಅಂತ ನಾಟಕವಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದರು. ಕಾಂಗ್ರೆಸ್ ಹೋರಾಟ ಮಾಡಬೇಕಾದರೆ ಬಿಜೆಪಿ, ಆರ್ಎಸ್ಎಸ್ನವರು ಬ್ರಿಟಿಷರ ಜೊತೆ ಶಾಮೀಲಾಗಿದ್ದರು. ಸ್ವಾತಂತ್ರ ಹೋರಾಟಗಾರರು ಜೈಲಿಗೆ ಹೋಗಲು ಅವರೇ ಬ್ರಿಟಿಷರಿಗೆ ಸಹಾಯ ಮಾಡಿದ್ದರು. ನನ್ನನ್ನು ಕಂಡರೆ ಬಿಜೆಪಿಯವರಿಗೆ ಭಯವೋ ಭಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಸ್ಯವಾಡಿದ್ದಾರೆ