ಬಾಬಾ ರಾಮದೇವ್‌ಅವರ ಪತಂಜಲಿ ಆಯುರ್ವೇದ ಉತ್ಪನ್ನಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಉತ್ತರಾಖಂಡ ಸರ್ಕಾರಕ್ಕೆ ಅನುಮತಿಯನ್ನು ನೀಡಿದೆ. ಪತಂಜಲಿ ಆಯುರ್ವೇದ ಉತ್ಪನ್ನಗಳ ಬಗ್ಗೆ ಜನರನ್ನು ತಪ್ಪು ದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳಲು ಆಯುಷ್‌ಸಚಿವಾಲಯ ಹಸಿರು ನಿಶಾನೆ ತೋರಿದೆ. ಕಾಂಗ್ರೆಸ್ ಸಂಸದ ಕಾರ್ತಿ. ಪಿ. ಚಿದಂಬರಂ ಅವರ ದೂರಿನ ಹಿನ್ನೆಲೆಯಲ್ಲಿ ಈ ನಿರ್ದೇಶನವನ್ನು ನೀಡಲಾಗಿದೆ. ಕಾರ್ತಿ ಅವರಿಗೆ ಬರೆದ ಪತ್ರದಲ್ಲಿ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಅವರು, 1954 ರ ಡ್ರಗ್ಸ್ ಮತ್ತು ಮ್ಯಾಜಿಕಲ್ ರೆಮಿಡೀಸ್ ಕಾಯಿದೆ ಮತ್ತು ಅದರ ಅಡಿಯಲ್ಲಿನ ನಿಯಮಗಳನ್ವಯ ರಾಜ್ಯ ಪರವಾನಗಿ ಪ್ರಾಧಿಕಾರಕ್ಕೆ ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ.2022ರ ಏಪ್ರಿಲ್‌ನಲ್ಲಿಯೂ ಡಾ.ಬಾಬು ಅವರು ಸಲ್ಲಿಸಿದ ಆರ್‌ಟಿಐ ಬಳಿಕ ಆಯುಷ್‌ಸಚಿವಾಲಯ ಪತಂಜಲಿ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿತ್ತು. ಆದರೆ, ಎಸ್‌ಎಲ್‌ಎ ಡ್ರಗ್ಸ್ ಮತ್ತು ಕಾಸ್ಮೆಟಿಕ್ ಆಕ್ಟ್ ಅಡಿಯಲ್ಲಿ ನಿಯಮ 170 ಅನ್ನು ಉಲ್ಲೇಖಿಸಿ ಕ್ರಮ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಯೂ ಟರ್ನ್‌ತೆಗೆದುಕೊಂಡಿತ್ತು. ಇದರಿಂದ ಪತಂಜಲಿ ವಿರುದ್ಧ ಯಾವುದೇ ಕ್ರಮ ಆಗಿರಲಿಲ್ಲ.