ಎಫ್ಐಎಚ್ ಹಾಕಿ ಟೂರ್ನಿಯಲ್ಲಿ ಭಾರತ ಭರ್ಜರಿ ಪ್ರದರ್ಶನ ಸತತ ಎರಡು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತ ಹಾಕಿ ತಂಡಎಫ್ಐಎಚ್ ಪ್ರೊ ಲೀಗ್ ಹಾಕಿ ಟೂರ್ನಿಯಲ್ಲಿ ಭಾರತ ತನ್ನ ಗೆಲುವಿನ ಓಟವನ್ನು ಮುಂದುವರಿಸಿದೆ. ಇಂಗ್ಲೆಂಡ್ ವಿರುದ್ಧ ನಡೆದ 2ನೇ ಪಂದ್ಯದಲ್ಲಿ ಭಾರತ 4-3 ಗೋಲುಗಳ ಗೆಲುವು ಸಾಧಿಸಿತು. ಮೊದಲ ಪಂದ್ಯದಲ್ಲಿ ಶೂಟೌಟ್ ಮೂಲಕ 3-2ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಭಾರತ, 2ನೇ ಪಂದ್ಯದಲ್ಲೂ ಗೆಲ್ಲುವುದರೊಂದಿಗೆ ಅಗ್ರಸ್ಥಾನದಲ್ಲೇ ಮುಂದುವರಿಯಲಿದೆ.