ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸೋಲನ್ನು ನೋಡುತ್ತಿರುವುದನ್ನು ಈ ಸಮಯದಲ್ಲಿ ಗಮನಿಸಬಹುದು. ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ಗೆ ಹೆದರಿ ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಇಂಡಿಯಾ ಅನ್ನು ರಿಪಬ್ಲಿಕ್ ಆಫ್ ಭಾರತ ಮಾಡಲು ಹೊರಟಿದೆ ನಮ್ಮ ದೇಶದ ನೋಟಿನ ಮೇಲೆ ಇಂಡಿಯಾ ಅಂತ ಇದೆ. ಇದನ್ನು ಬದಲಿಸಲು ಹೊರಟಿದ್ದಾರೆ. ನಾವೆಲ್ಲರೂ ಭಾರತೀಯರೇ ಆದರೆ ಸೋಲಿಗೆ ಹೆದರಿ ಈ ರೀತಿ ಮಾಡುತ್ತಿರುವುದು ಸರಿಯಲ್ಲ. ಅವರ ಆಲೋಚನೆಗಳು ಇನ್ನೂ ಬಹಳ ಇದಾವೆ. ಅವುಗಳನ್ನು ಈಗ ಹೇಳಿದರೆ ಎಲ್ಲರೂ ಶಾಕ್ ಆಗುತ್ತಾರೆ. ಅವುಗಳನ್ನು ಬೇರೆ ಸಮಯದಲ್ಲಿ ಮಾತನಾಡುತ್ತೇನೆ. ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಈ ಪ್ರಸ್ತಾವನೆಯನ್ನು ವಿರೋಧಿಸುತ್ತೇನೆ. ಇಂತಹ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ನೀವು ಹೆಚ್ಚು ದಿನ ಅಧಿಕಾರದಲ್ಲಿ ಇರಲು ಸಾಧ್ಯವಿಲ್ಲ. ಇದನ್ನು ಮಾಡಬೇಡಿ ಎಂದು ಹೇಳಿದರು.