ಬಿಜೆಪಿ ಕೇಂದ್ರ ಸರ್ಕಾರವು ದೇಶದ ಹೆಸರನ್ನು ಇಂಡಿಯಾ’ ಬದಲು ದೇಶದ ಹೆಸರನ್ನು ರಿಪಬ್ಲಿಕ್‌ಆಫ್‌ಭಾರತ್' ಎಂದು ಕರೆಯಬೇಕು ಎಂಬುದಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಣಯಕ್ಕೆ ಮುಂದಾಗಿದೆ. ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ
ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ಪ್ರೆಸಿಡೆಂಟ್ ಆಫ್ ಭಾರತ್' ಎಂದು ಉಲ್ಲೇಖಿಸಿದ ನಂತರ ಈ ಚರ್ಚೆ ಹುಟ್ಟಿಕೊಂಡಿದೆ.ಜಿ20 ಸಭೆಗೆ ಬರುವ ಗಣ್ಯರಿಗೆ ಸೆಪ್ಟೆಂಬರ್ 9 ರಂದು ರಾಷ್ಟ್ರಪತಿ ಭವನದಲ್ಲಿ ಬೃಹತ್ ಔತಣಕೂಟ ಏರ್ಪಡಿಸಲಾಗಿದೆ. ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು
ಪ್ರೆಸಿಡೆಂಟ್ ಆಫ್ ಭಾರತ್’ ಎಂದು ತಮ್ಮ ಹುದ್ದೆಯನ್ನು ಉಲ್ಲೇಖಿಸಿದ್ದಾರೆ. ಈವರೆಗೆ ಪ್ರೆಸಿಡೆಂಟ್ ಆಫ್ ಇಂಡಿಯಾ ಎಂದು ರಾಷ್ಟ್ರಪತಿಗಳು ತಮ್ಮ ಹುದ್ದೆಯನ್ನು ಉಲ್ಲೇಖಿಸುತ್ತಿದ್ದರು.ಬಿಜೆಪಿ ಅನೇಕ ನಾಯಕರು ಇದಕ್ಕೆ ಬೆಂಬಲ ಸೂಚಿಸಿದ್ದರೆ, ದೇಶದ ಹೆಸರನ್ನೇ ಬದಲಾಯಿಸಲು ಸರ್ಕಾರ ಮುಂದಾಗಿದೆ ಎಂದು ಐಎನ್‌ಡಿಐಎ ಒಕ್ಕೂಟ ತೀವ್ರವಾಗಿ ಖಂಡಿಸಿದೆ.