ಗೋವಾದಲ್ಲಿ ಆರಂಭವಾದ ಹರ್‌ಘರ್‌ಜಲ ಉತ್ಸವವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು. ಮೊದಲಿಗೆ ದೇಶದ ಜನತೆಗೆ ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭಾಶಯಗಳು, ಇಂದು ನಾವು ಮೂರು ಪ್ರಮುಖ ಮೈಲಿಗಲ್ಲುಗಳನ್ನು ದಾಟಿದ್ದೇವೆ ಗೋವಾ ದೇಶದಲ್ಲೇ ಪ್ರತಿ ಮನೆಯಲ್ಲೂ ನೀರಿ ಪ್ರಮಾಣ ಪತ್ರ ಪಡೆದ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ ಗೋವಾದ ಜನತೆಗೆ ಹಾಗೂ ಅಲ್ಲಿನ ಮುಖ್ಯಮಂತ್ರಿಗಳಿಗೆ ನನ್ನ ಅಭಿನಂದನೆಗಳು ತಿಳಿಸುತ್ತೇನೆ. ಇಂದು ದೇಶದ 10 ಕೋಟಿ ಗ್ರಾಮೀಣ ಕುಟುಂಬಗಳಿಗೆ ಪೈಪ್‌ಲೈನ್‌ನಲ್ಲಿ ಶುದ್ಧ ನೀರಿನ ಸೌಲಭ್ಯ ಕಲ್ಪಿಸಿರುವುದು ಎರಡನೇ ಸಾಧನೆಯಾಗಿದೆ. ಮನೆ ಮನೆಗೆ ನೀರು ತಲುಪಿಸುವ ಸರ್ಕಾರದ ಅಭಿಯಾನಕ್ಕೆ ಇದೊಂದು ದೊಡ್ಡ ಯಶಸ್ಸು. ಪ್ರತಿಯೊಬ್ಬರ ಶ್ರಮಕ್ಕೆ ಇದೊಂದು ಉತ್ತಮ ಉದಾಹರಣೆಯೂ ಹೌದು ಎಂದು ಹೇಳಿದ್ದಾರೆ.