ಸಿದ್ದರಾಮಯ್ಯ ಹಾಗೂ ಡಿಕೆಶಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಒಂದು ಪಕ್ಷ ಬಿಡಲು ಬಲವಾದ ಕಾರಣ, ಅದು ಪಕ್ಷದಿಂದ ಆಗಿರಬೇಕು ಇಲ್ಲವೇ ನನ್ನಿಂದ ಆಗಿರಬೇಕು. ಅದು ನನ್ನ ಕಡೆಯಿಂದ ಆದ್ರೆ ಪಕ್ಷ ಸ್ಪಷ್ಟವಾಗಿ ಹೇಳಬೇಕು 2019ರಲ್ಲಿ ಸಂಸದ ಆಗಿದ್ದರೂ ನಿಲ್ಲಲು ಅವಕಾಶ ಕೊಡಲಿಲ್ಲ. ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಪ್ಪಿಸಲಾಗಿದೆ. ಪಕ್ಷಕ್ಕೆ ನನ್ನದೇ ಆದ ಅಳಿಲು ಸೇವೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನನ್ನ ಸೇವೆಯೂ ಇದೆ. ಇವತ್ತು ಈ ನಿರ್ಧಾರ ಮಾಡಿದ್ದೇನೆ, ಮುಂದೆ ಒಳ್ಳೆಯ ಅವಕಾಶಗಳು ಬರುತ್ತವೆ 2023ಕ್ಕೆ ನಾನು ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿ ಆಗುವುದು ಖಚಿತ. ಇಂದು ಸಂಜೆ ಒಳಗೆ ಅಧಿಕೃತವಾಗಿ ರಾಜೀನಾಮೆ ಕೊಡ್ತೀನಿ ಎಂದು ಮುದ್ದಹನುಮೇಗೌಡ ಹೇಳಿದರು.