ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ದೆಹಲಿಯ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಿನ್ನೆಯೂ ಜಾರಿ ನಿರ್ದೇಶನಾಲಯಕ್ಕೆ ಕೆಮ್ಮುತ್ತಲೇ ವಿಚಾರಣೆಗೆ ಹಾಜರಾಗಿದ್ದರು. ಆದಾಯ ತೆರಿಗೆ ಇಲಾಖೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಎಪಿಜೆ ಅಬ್ದುಲ್ ಕಲಂ ಮಾರ್ಗ್‍ನಲ್ಲಿರುವ ಕೇಂದ್ರ ಕಚೇರಿಯಲ್ಲಿ ರಾಜೀವ್ ಕುಮಾರ್ ನೇತೃತ್ವದ ಅಧಿಕಾರಗಳ ತಂಡದಿಂದ ಡಿಕೆಶಿ ವಿಚಾರಣೆ ನಡೆಯಿತು. ಒಟ್ಟಿನಲ್ಲಿ ಇದೀಗ ಡಿಕೆಶಿಯವರು ಸತ್ಯೇಂದ್ರ ಜೈನ್ ಮಾದರಿಯಲ್ಲಿ ಜೈಲು ಸೇರುತ್ತಾರಾ ಅನ್ನೋ ಅನುಮಾನವೊಂದು ಎದ್ದಿದೆ.