ಭಾರತವು ಜಮ್ಮು ಕಾಶ್ಮೀರವನ್ನು ವಶಪಡಿಸಿಕೊಂಡಿದೆ ಎಂದು ಪಾಕಿಸ್ತಾನವು ಆರೋಪಿಸಿತ್ತು. ಇದಕ್ಕೆ ಭಾರತ ವಿರೋಧ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ರುಚಿರಾ ಕಾಂಬೋಜ್ ಮಾತನಾಡಿ, ಪಾಕಿಸ್ತಾನದ ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದು ಅಪರಾಧವಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಂತಿ ಹಾಗೂ ಭದ್ರತೆಯ ಕುರಿತು ಮುಕ್ತ ಚರ್ಚೆಯಲ್ಲಿ ಈ ರೀತಿ ಹೇಳಿಕೆ ನೀಡಿದ್ದು ಹಾನಿಕರ ಹಾಗೂ ದಾರಿತಪ್ಪಿಸುವ ಕೆಲಸವಾಗಿದೆ. ಉಗ್ರರರಿಗೆ ತರಬೇತಿ ನೀಡಿ ಭಾರತ ಹಾಗೂ ಅಫ್ಘಾನಿಸ್ತಾನಕ್ಕೆ ಕಳುಹಿಸಲಾಗುತ್ತದೆ. ಆ ದೇಶದ ನಾಯಕರೇ ಭಯೋತ್ಪಾದಕ ಗುಂಪುಗಳನ್ನು ಪ್ರೋತ್ಸಾಹಿಸುತ್ತಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. ಇಂತಹ ಪಾಕಿಸ್ತಾನವು ಯಾವುದು ಕೆಟ್ಟದ್ದು, ಯಾವುದು ಒಳ್ಳೆಯದು ಎಂದು ಜಗತ್ತಿಗೆ ಹೇಳುತ್ತದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ ಎಲ್ಲವೂ ಭಾರತದ ಅವಿಭಾಜ್ಯ ಅಂಗಗಳು. ಇದರ ಬಗ್ಗೆ ನೀವು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.