ಇದು ನನ್ನ ಕೊನೇ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ – ನಾಮಪತ್ರ ಸಲ್ಲಿಸಿ ಸಿದ್ದು ಮನವಿ

ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.ಬಳಿಕ ನಂಜಗೂಡಿನಲ್ಲಿ ನಡೆದ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಸಮಾವೇಶದಲ್ಲಿ ಮಾತನಾಡಿದ ಅವರು, ಇದು ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಹಾಗಾಗಿ ಈ ಬಾರಿ 1 ಲಕ್ಷ ಮತಗಳ ಅಂತರದಿಂದ ನನ್ನನ್ನ ಗೆಲ್ಲಿಸಬೇಕು ಆಮೇಲೆ ಯತೀಂದ್ರ, ಧವನ್ ರಾಕೇಶ್ ಇದ್ದಾರೆ. ಧವನ್‌ರಾಜಕೀಯಕ್ಕೆ ಬರಲು ಇನ್ನೂ 8 ವರ್ಷ ಬೇಕು. ಓದು ಮುಗಿಸಿದ ನಂತರ ರಾಜಕಾರಣಕ್ಕೆ ಬರುತ್ತಾನೆ. ರಾಕೇಶ್‌ಮೇಲೆ ಇದ್ದ ಪ್ರೀತಿಯನ್ನ ಅವನ ಮಗನ ಮೇಲೂ ತೋರಿಸುತ್ತಿದ್ದೀರಿ ಅದಕ್ಕೆ ಧನ್ಯವಾದಗಳು.ಹಾಗಾಗಿ ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *