ಈ ಮೊದಲು ಬಿಬಿಎಂಪಿ ಹಣಕಾಸು ವಿಭಾಗ ಇಂದಿರಾ ಕ್ಯಾಂಟೀನ್‍ಗಳ ಮೇಲ್ವಿಚಾರಣೆ ನಡೆಸುತ್ತಿತ್ತು. ಇತ್ತೀಚೆಗಷ್ಟೇ ಇಂದಿರಾ ಕ್ಯಾಂಟೀನ್‍ಗಳು ಕ್ಲೋಸ್ ಆಗುತ್ತವೆ ಎಂಬ ವದಂತಿ ಹಬ್ಬಿತ್ತು. ಅಷ್ಟೇ ಅಲ್ಲದೇ ಆಹಾರ ಪೂರೈಕೆ ಹಾಗೂ ವಿತರಣೆ ಸರಿಯಾಗಿ ಆಗುತ್ತಿಲ್ಲ ಎಂಬ ಸಾಕಷ್ಟು ದೂರುಗಳು ಬಂದಿದ್ದವು. ಆದರೆ ಇದೀಗ ಇಂದಿರಾ ಕ್ಯಾಂಟೀನ್‍ಗಳ ಜವಾಬ್ದಾರಿಯನ್ನು ಹಣಕಾಸು ವಿಭಾಗದಿಂದ ಆರೋಗ್ಯ ವಿಭಾಗಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರು ನೀಡಿದ್ದಾರೆ. ನೀಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ, ಇಂದಿರಾ ಕ್ಯಾಂಟೀನ್‍ಗಳ ನಿರ್ವಹಣೆಗೆ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಿದ್ದಾರೆ. ನೋಡಲ್ ಅಧಿಕಾರಿಗಳು ಇಂದಿರಾ ಕ್ಯಾಂಟೀನ್‍ಗಳ ಸಮರ್ಪಕ ನಿರ್ವಹಣೆಗೆ ಪಾಲಿಕೆ ಮುಂದಾಗಲಿದೆ.