ಕಳೆದ ವರ್ಷ ನವೆಂಬರ್‌ನಿಂದ ಇರಾನ್‌ನ ಪ್ರಾಂತ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗದಂತೆ ತಡೆಯಲು ನಿಗೂಢವಾಗಿ ವಿಷವುಣಿಸಲಾಗುತ್ತಿತ್ತು. ದೇಶಾದ್ಯಂತ ಸುಮಾರು 5,000 ವಿದ್ಯಾರ್ಥಿಗಳು ವಿಷಪ್ರಾಶನಕ್ಕೊಳಗಾಗಿ ಅಸ್ವಸ್ಥರಾದ ಬಳಿಕ ಇದೀಗ ವಿಷವುಣಿಸಿದ ಆರೋಪದ ಮೇಲೆ ಕೆಲ ವಿದ್ಯಾರ್ಥಿನಿಯರ ಪೋಷಕರು ಸೇರಿದಂತೆ ಹಲವರನ್ನು ಬಂಧನ ಮಾಡಲಾಗಿದೆ. ಅಲ್ಲಿನ ಗುಪ್ತಚರ ಸಂಸ್ಥೆ ಘಟನೆಗೆ ಸಂಬಂಧಪಟ್ಟಂತೆ ಮೊದಲ ಬಾರಿ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ. ಹಲವರನ್ನು ಈಗಾಗಲೇ ಬಂಧನ ಮಾಡಲಾಗಿದೆ