ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, ಒಬ್ಬ ಐಎಎಸ್ ಅಧಿಕಾರಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುವುದು ಅದೊಂದು ಮಹತ್ವಪೂರ್ಣ ಅವಕಾಶವೇ ಆಗಿದೆ. ಜಿಲ್ಲಾಧಿಕಾರಿಗಳಾದ ನೀವು ಆಡಳಿತದ ಭಾಗವೇ ಆಗಿದ್ದೀರಿ. ಜಿಲ್ಲಾಧಿಕಾರಿಗಳು ಸಮಯೋಚಿತ ತೀರ್ಮಾನಗಳ ಮೂಲಕ ಜನರಿಗೆ ನೆರವಾಗಬೇಕು. ಸಮಯಪ್ರಜ್ಞೆ, ಸ್ಥಿತ ಪ್ರಜ್ಞತೆಯಿಂದ ಕಾರ್ಯ ನಿರ್ವಹಿಸಿ ನಿಮಗೆ ಹೆಚ್ಚಿನ ಅಧಿಕಾರವೂ ಇದೆ. ಇಲ್ಲಿ ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಇದನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸಿದರೆ ಅಭಿವೃದ್ಧಿ ಸಾಧ್ಯತೆ ಜಿಲ್ಲೆಯಲ್ಲಿ ನೀವು ಯಾವ ರೀತಿ ಹೆಜ್ಜೆ ಗುರುತು ಮೂಡಿಸುತ್ತೀರಿ ಎನ್ನುವುದು ಮುಖ್ಯವಾಗುತ್ತದೆ ಎಂದರು.