ಇಂದು ಆಟೋ ಚಾಲಕರು ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳನ್ನು ರಸ್ತೆಗಿಳಿಸಬಾರದು ಎಂದು ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿವೆ. ಇ-ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಟೋ ಒಕ್ಕೂಟಗಳು ಒಂದು ದಿನದ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಬೆಂಗಳೂರು ರಸ್ತೆಗಳಲ್ಲಿ ಆಟೋರಿಕ್ಷಾಗಳು ಸಂಚರಿಸುವುದಿಲ್ಲ. ಇತ್ತೀಚೆಗಷ್ಟೇ ಆಟೋ ಚಾಲಕರೊಬ್ಬರು ಬೈಕ್ ಟ್ಯಾಕ್ಸಿ ಸವಾರನನ್ನು ಅಡ್ಡಗಟ್ಟಿ, ಹೆಲ್ಮೆಟ್ ಒಡೆದು, ಮತ್ತೆ ಬೈಕ್ ಟ್ಯಾಕ್ಸಿ ನಡೆಸುವುದು ಕಂಡು ಬಂದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಬಳಿಕ ಆಟೋ ಚಾಲಕರನ್ನು ಪೊಲೀಸರು ಬಂಧಿಸಿದ್ದರು.