ದಿನದಿಂದ ದಿನಕ್ಕೆ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದ್ದು, ಇದನ್ನು ಕಡಿಮೆ ಮಾಡಲು ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಹಲವು ಕಡೆಗಳಲ್ಲಿ ಮೇಲ್ಸೇತುವೆ ನಿರ್ಮಾಣ ಕೂಡ ಈ ಯೋಜನೆಯ ಭಾಗವಾಗಿದೆ.
2017ರಲ್ಲಿ ಬಿಬಿಎಂಪಿ ಈಜಿಪುರ ಮೇಲ್ಸೇತುವೆ ಕಾಮಗಾರಿಗೆ ಟೆಂಡರ್ ನೀಡಿತ್ತು. ಅದಾದ ನಂತರ ರಾಜ್ಯದಲ್ಲಿ ಸರ್ಕಾರಗಳು ಬದಲಾದವು, ಕಾಮಗಾರಿ ನೆನೆಗುದಿಗೆ ಬಿದ್ದ ನಂತರ ಸರ್ಕಾರ ಕಳೆದ ವರ್ಷ ಟೆಂಡರ್ ಅನ್ನು ರದ್ದು ಮಾಡಿತ್ತು. ಆದರೆ, ಈಗ ಮತ್ತೊಂದು ಕಂಪನಿ ಮೂಲಕ ಕಾಮಗಾರಿ ಪುನರಾರಂಭಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ.ಹೊಸ ಗುತ್ತಿಗೆದಾರರಿಗೆ ವಾರದೊಳಗೆ ಕಾಮಗಾರಿ ಆದೇಶ ನೀಡಲಾಗುವುದು ಎಂದು ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದು, 15 ದಿನಗಳೊಳಗೆ ಕಾಮಗಾರಿ ಆರಂಭವಾಗಲಿದೆ ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ ಎಂ ಲೋಕೇಶ್ ಮಾಹಿತಿ ನೀಡಿರುವುದಾಗಿ ಹೇಳಿದೆ.