ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ಗುಡ್ಬೈ ಹೇಳಿದ್ದಾರೆ

ರಾಜ್ಯ ರಾಜಕೀಯದಿಂದ ಸಚಿವ ಕೆ.ಎಸ್ ಈಶ್ವರಪ್ಪ ಹಿಂದೆ ಸರಿದಿದ್ದಾರೆ. ಈ ಸಂಬಂಧ ನಡ್ಡಾಗೆ ಪತ್ರ ಬರೆದಿರುವ ಈಶ್ವರಪ್ಪ, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರಿಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಈಶ್ವರಪ್ಪ ತಿಳಿಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ಲಿಸ್ಟ್ ಬಿಡುಗಡೆ ಮುನ್ನವೇ ಈಶ್ವರಪ್ಪ ನಡೆ ಭಾರೀ ಕುತೂಹಲ ಮೂಡಿಸಿದೆ.

Leave a Reply

Your email address will not be published. Required fields are marked *