ಈ ತಿಂಗಳ ಕೊನೆಯಲ್ಲಿ ನೂತನ ಸಂಸತ್‌ಭವನ ಲೋಕಾರ್ಪಣೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸುವ ಸಾಧ್ಯತೆಯಿದೆ

ಡಿಸೆಂಬರ್ 2020 ರಲ್ಲಿ ಹೊಸ ಸಂಸತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿದ್ದರು. ಸರ್ಕಾರ ಕಳೆದ ವರ್ಷದ ನವೆಂಬರ್‌ಒಳಗಡೆ ಕಾಮಗಾರಿ ಮುಕ್ತಾಯಗೊಳಿಸುವ ಗುರಿಯನ್ನು ನಿಗದಿ ಪಡಿಸಿತ್ತು. ಆದರೆ ಕೋವಿಡ್‌ಮತ್ತು ಇತರೆ ಕೆಲ ಸಮಸ್ಯೆಗಳಿಂದಾಗಿ ಡೆಡ್‌ಲೈನ್‌ವಿಸ್ತರಣೆಯಾಗಿ ಈಗ ಉದ್ಘಾಟನೆಯ ಹಂತಕ್ಕೆ ಬಂದಿದೆ. ನೂತನ ಸಂಸತ್ ಭವನವನ್ನು ಈ ತಿಂಗಳ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸುವ ಸಾಧ್ಯತೆಯಿದೆ. ಮೇ ಕೊನೆಯ ವಾರದಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಏರಿ 9 ವರ್ಷ ಪೂರ್ಣಗೊಳ್ಳುತ್ತದೆ. ಈ ಕಾರಣಕ್ಕೆ ಮೇ ಕೊನೆಯಲ್ಲಿ ಸಂಸತ್‌ಭವನ ಲೋಕಾರ್ಪಣೆಯಾಗುವ ಸಾಧ್ಯತೆಯಿದೆ.ಸುಮಾರು 1,200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಕುಳಿತುಕೊಳ್ಳಲು ಅವಕಾಶವಿದೆ. ಹೊಸ ಸಂಸತ್ತು ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ ಹೆಸರಿನ ಮೂರು ದ್ವಾರಗಳನ್ನು ಹೊಂದಿದೆ. ಸಂಸದರು, ವಿಐಪಿಗಳು ಮತ್ತು ಸಂದರ್ಶಕರಿಗೆ ಪ್ರತ್ಯೇಕ ಪ್ರವೇಶವನ್ನು ಹೊಂದಿದೆ. ಕಟ್ಟಡ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಕಟ್ಟಡದ ಒಳಾಂಗಣ ವಿನ್ಯಾಸದ ಕೆಲಸಗಳು ನಡೆಯುತ್ತಿವೆ

Leave a Reply

Your email address will not be published. Required fields are marked *