ಈ ಬಾರಿಯ ಬಜೆಟ್ನಲ್ಲಿ ರಾಜ್ಯದಲ್ಲಿ ಹಸಿರೀಕರಣಕ್ಕೆ ಬಜೆಟ್ನಲ್ಲಿ 100 ಕೋಟಿ: ಸಿಎಂ ಬೊಮ್ಮಾಯಿ

ಶುಕ್ರವಾರ ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್ಬಾಗ್ಗಾಜಿನಮನೆಯಲ್ಲಿ ಆಯೋಜಿಸಿರುವ ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ-2023 ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು. ಬೆಂಗಳೂರು ಉದ್ಯಾನ ನಗರ ಎಂಬ ಖ್ಯಾತಿ ಗಳಿಸಿದೆ. ಆದರೆ, ಅಭಿವೃದ್ಧಿ ಕಾಮಗಾರಿಗಳಿಂದಾಗಿ ಈ ಹೆಸರು ಹಿಂದೆ ಸರಿದಿದ್ದು, ಮತ್ತೊಮ್ಮೆ ಉದ್ಯಾನ ನಗರದ ಗತ ವೈಭವ ಮರುಕಳಿಸುವಂತೆ ಸರ್ಕಾರ ಆದ್ಯತೆ ನೀಡಲಿದೆ. ಲಾಲ್ಬಾಗ್, ಕಬ್ಬನ್ಪಾರ್ಕ್ ಸೇರಿದಂತೆ ಬಿಬಿಎಂಪಿ ಉದ್ಯಾನಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ನಗರದ ಹೊರ ವಲಯದಲ್ಲಿ ಉದ್ಯಾನಗಳ ಅಭಿವೃದ್ಧಿ ಮಾಡಲಾಗುವುದು. ಈ ಮೂಲಕ ಉದ್ಯಾನ ನಗರ ಹೆಸರನ್ನು ಖಾಯಂಗೊಳಿಸಲು ಕ್ರಮಕೈಗೊಳ್ಳಲಾಗುವುದು ರಾಜ್ಯದಲ್ಲಿ ಹಸಿರೀಕರಣ ವಿಸ್ತರಣೆಗೆ ಆದ್ಯತೆ ನೀಡಲಾಗಿದ್ದು, ಈ ಬಾರಿಯ ಬಜೆಟ್ನಲ್ಲಿ 100 ಕೋಟಿ ಮೀಸಲಿಡುತ್ತೇವೆ. ಹಾಗೆಯೇ ತೋಟಗಾರಿಕೆ ಫಾರಂ ಅಭಿವೃದ್ಧಿಗೆ ಸಮರ್ಪಕ ಅನುದಾನ ನೀಡಲು ತೀರ್ಮಾನ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Leave a Reply

Your email address will not be published. Required fields are marked *