ಬಜೆಟ್‌ಮಂಡನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಬಜೆಟ್‌ಮಂಡನೆಯ ವೇಳೆ ಎಲ್ಲವನ್ನೂ ಹೇಳಲು ಆಗುವುದಿಲ್ಲ. ಹೀಗಾಗಿ, ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಬಜೆಟ್‌ನಲ್ಲಿ ಹೇಳಿಲ್ಲ. ಆದರೆ, ಈಗಾಗಲೇ 7ನೇ ವೇತನ ಆಯೋಗವನ್ನು ಅನುಷ್ಠಾನ ಮಾಡಲಾಗಿದ್ದು, ಇದೇ ವರ್ಷದಿಂದ ಅನುಷ್ಠಾನಕ್ಕೆ ಬರುತ್ತದೆ. ಕಳೆದ ವರ್ಷಕ್ಕಿಂತ 43,462 ಕೋಟಿ ರೂ. ಹೆಚ್ಚಿನ ಗಾತ್ರದ ಬಜೆಟ್‌ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.