ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಕಟ್ಟಡದ ನೆಲಮಹಡಿಯಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಸಾವನ್ನಪ್ಪಿದ್ದಾರೆ. ಕುಟುಂಬದ ಇತರ ಮೂವರು ಸದಸ್ಯರು ಕೂಡ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆಯಲ್ಲಿನ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂಬ ಅನುಮಾನವಿದ್ದು, ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅವಘಡದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.