ಮಂಗಳವಾರ ರಾತ್ರಿ ಡಾಲರ್ಸ್‌ಕಾಲೋನಿ ನಿವಾಸದಲ್ಲಿ 61 ವರ್ಷದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್‌ಕತ್ತಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾಗಿದ್ದು, ಉಮೇಶ್ ಕತ್ತಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ”ಅರಣ್ಯ ಸಚಿವ ಉಮೇಶ್ ಕತ್ತಿ, ನನ್ನ ಆಪ್ತ ಸಹೋದ್ಯೋಗಿ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಉಮೇಶ್ ಕತ್ತಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.