ವಿಧಾನಸೌಧದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ತಜ್ಞರು, ತಾಂತ್ರಿಕಾ ಸಲಹಾ ಸಭೆ ನಡೆಯಿತ್ತು. ಈ ವೇಳೆ ಮಾತನಾಡಿದ ಸಚಿವರು ಎಚ್‌ಎನ್‌ವೈರಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಆರೋಗ್ಯ ಸಿಬ್ಬಂದಿಗೆ ಇಂದಿನಿಂದಲೇ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕರ್ನಾಟಕದಲ್ಲಿ ಈವರೆಗೆ 26 ಮಂದಿಯಲ್ಲಿ ಎಚ್‌ಎನ್‌ವೈರಸ್ ಪತ್ತೆಯಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ ಜ್ವರ, ಕೆಮ್ಮು, ಶೀತ ಜ್ವರದ ಹಾವಳಿ ಹೆಚ್ಚಾಗಿದೆ. ಇದಕ್ಕೆ ಎಚ್‌ಎನ್‌ವೈರಸ್ ಕಾರಣವಾಗಿದ್ದು, ಕಳೆದ ಎರಡು ತಿಂಗಳಿನಿಂದ ಈ ಕುರಿತು ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ. ಎಲ್ಲೆಡೆ ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆ.
ಶೀತ ಜ್ವರದಂತೆ ಅನಾರೋಗ್ಯ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು. ನಿರ್ಲಕ್ಷ್ಯ ಮಾಡದೇ ಚಿಕಿತ್ಸೆ ಪಡೆಯಬೇಕು. ಸದ್ಯಕ್ಕೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.