ಕೇಂದ್ರ ಸರ್ಕಾರದ ಇಲಾಖಾ ಹುದ್ದೆಗಳಿಗೆ ಸಿಬ್ಬಂದಿ ಆಯ್ಕೆ ಸಮಿತಿಯು ನಡೆಸುವ ಸಿಜಿಎಲ್ ಪರೀಕ್ಷೆಗಳಲ್ಲಿ ಇಂಗ್ಲಿಷ್ ಮತ್ತು ಹಿಂದಿಯನ್ನು ಮಾತ್ರ ಪರಿಗಣನೆಗೆ ತೆಗೆದುಕೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಭಾಷಾ ತಾರತಮ್ಯ, ತ್ರಿಭಾಷ ಸೂತ್ರಕ್ಕೆ ಕೇಂದ್ರ ಸರ್ಕಾರ ಸಮಾಧಿ ಕಟ್ಟುತ್ತಿದೆ ಎಂದು ಕಿಡಿಕಾರಿದ್ದಾರೆ. “ಕೇಂದ್ರ ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು” ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.