ಜಾಗತಿಕ ಹೂಡಿಕೆದಾರ ಸಮಾವೇಶದ ರೋಡ್‌ಶೋ ಭಾಗವಾಗಿ ದೆಹಲಿಯಲ್ಲಿಂದು ನಡೆದ ಸಭೆಯಲ್ಲಿ, ಐಟಿಸಿಯ ಸಿಎಂಡಿ ಸಂಜೀವ್ ಪುರಿ, ಕಂಪನಿಯ ಉಪಾಧ್ಯಕ್ಷ ಅನಿಲ್ ರಜಪುತ್ ಅವರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್.ನಿರಾಣಿ ಭೇಟಿಯಾಗಿ ಬಾದಾಮಿ, ಐಹೊಳೆ ಮತ್ತು ಪಟ್ಟದಕಲ್ಲು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಾಗಿದ್ದು ಐತಿಹಾಸಿಕ ಪ್ರವಾಸಿ ತಾಣ ಬಾದಾಮಿಯಲ್ಲಿ ಪಂಚತಾರಾ ಹೋಟೆಲ್ ಸ್ಥಾಪಿಸುವಂತೆ ಐಟಿಸಿ ಮುಖ್ಯಸ್ಥರಿಗೆ ಸಲಹೆ ನೀಡಿದರು.ಈ ಭಾಗದಲ್ಲಿ ಪಂಚತಾರಾ ಹೋಟೆಲ್ ಸ್ಥಾಪಿಸಿದರೆ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಆದರೆ ಹೋಟೆಲ್ ಸ್ಥಾಪನೆಯ ಸಾಧ್ಯತೆ ಬಗ್ಗೆ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಐಟಿಸಿ ಮುಖ್ಯಸ್ಥ ಸಂಜೀವ್ ಪುರಿ ಪ್ರತಿಕ್ರಿಯಿಸಿದ್ದಾರೆ.