ಒಂಭತ್ತು ಜಿಲ್ಲೆಗಳ ಆರ್ ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಬೆಂಗಳೂರು ಹೊರವಲಯದ ಅತ್ತಿಬೆಲೆ ಆರ್ ಟಿಒ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕಚೇರಿ ಮೇಲೆ ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ 2 ವಾಹನಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆ 4 ಗಂಟೆಗೆ ಕಚೇರಿ ಮೇಲೆ ರೈಡ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ 20 ಮಂದಿ ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.ಬೆಂಗಳೂರು, ಅತ್ತಿಬೆಲೆ, ವಿಜಯಪುರದ ಜಳಲಿ ಪೋಸ್ಟ್, ಬೆಳಗಾವಿಯ ನಿಪ್ಪಾಣಿ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ, ಕೋಲಾರದ ನಂಗ್ಲಿ, ಬಳ್ಳಾರಿ, ಕೊಪ್ಪಳ, ಹೊಸಪೇಟೆ, ಗುಂಡ್ಲುಪೇಟೆ, ಬೀದರ್ ನ ಹುಮನಬಾದ್ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿದ್ದಾರೆ. ಚೆಕ್ ಪೋಸ್ಟ್ ಗಳಲ್ಲಿ ಮಧ್ಯವರ್ತಿಗಳು ಹಾಗೂ ಲಂಚಕ್ಕೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಲೋಕಾಯುಕ್ತ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *