ಒಡಿಶಾದ ಬಾಲಸೋರ್‌ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ತ್ರಿಪಲ್‌ರೈಲು ದುರಂತಕ್ಕೆ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್‌ಭುಟ್ಟೋ ಜರ್ದಾರಿ ಹಾಗೂ ಅಫ್ಘಾನಿಸ್ತಾನದ ತಾಲಿಬಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂತಾಪ ಸೂಚಿಸಿದೆ. ಭಾರತದ ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಹೆಚ್ಚಿನ ಸಾವು ನೋವಾಗಿರುವುದು ತಿಳಿದು ದುಃಖವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ಕೊಡಲಿ. ರೈಲು ದುರಂತದಲ್ಲಿ ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಶುಭ ಹಾರೈಸಿವೆ. ಅಷ್ಟೇ ಅಲ್ಲದೇ ಕೆನಡಾ ಪ್ರಧಾನಿ ಜಸ್ಟಿನ್‌ಟ್ರುಡೋ, ಬ್ರಿಟನ್‌ಪ್ರಧಾನಿ ರಿಷಿ ಸುನಾಕ್‌ಸೇರಿದಂತೆ ದೇಶ-ವಿದೇಶ ಗಣ್ಯರು ಸಂತಾಪ ಸೂಚಿಸಿದ್ದಾರೆ.