ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಎಕ್ಸ್ ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. ರೈಲು ಅಪಘಾತದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಯವರು ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.ಈ ವೇಳೆ ಪ್ರದಾನಿಯವರಿಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಾಥ್ ನೀಡಿದರು.