ಓಲಾ, ಊಬರ್‌ಸೇವೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ನಿನ್ನೆ ನಡೆದ ಸಭೆ ಕುರಿತು ಮಾಹಿತಿ ಪಡೆದ ನ್ಯಾಯಮೂರ್ತಿಗಳು, ಓಲಾ ಹಾಗೂ ಊಬರ್‌ಓಡಿಸದಂತೆ ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ಆದೇಶ ಮಾಡಿದೆ. ಕೆಲವೊಂದು ವಿಚಾರ ಪ್ರಸ್ತಾಪಕ್ಕೆ ಕಾಲಾವಕಾಶ ನೀಡುವಂತೆ ಅಡ್ವೊಕೇಟ್‌ಜನರಲ್‌ಪ್ರಭುಲಿಂಗ ನಾವದಗಿ ಮನವಿ ಮಾಡಿದರು. 12 ದಿನ ಕಾಲಾವಕಾಶ ಕಲ್ಪಿಸುವಂತೆ ಕೋರಿದರು. ಇದಕ್ಕೆ ಸಮ್ಮತಿಸಿದ ಪೀಠ, ಅಲ್ಲಿಯವರೆಗೂ ಯಾವುದೇ ಕ್ರಮಕೈಗೊಳ್ಳುವ ಹಾಗೇ ಇಲ್ಲ ಎಂದು ತಿಳಿಸಿತು. ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ.