ಬುಧವಾರ ವಿಧಾನಸಭೆಯ ಮುಂಗಾರು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕದಲ್ಲಿ ಬದುಕುವವರು ಕನ್ನಡ ಕಲಿಯುವುದು ಕಡ್ಡಾಯ. ಶಾಲಾ-ಕಾಲೇಜುಗಳಲ್ಲಿ ಕನ್ನಡವನ್ನು ಬೋಧನಾ ಮಾಧ್ಯಮವಾಗಿ ಪರಿಚಯಿಸಲು ಮತ್ತು ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯನ್ನು ಸೃಷ್ಟಿಸುವ ಗುರಿಯನ್ನು ಇಟ್ಟುಕೊಂಡು ವಿಧೇಯಕ ಮಂಡಿಸಲು ಸರ್ಕಾರ ಮುಂದಾಗಿದೆ. ಕನ್ನಡವನ್ನು ಕಡ್ಡಾಯವಾಗಿ ಬಳಸುವುದಕ್ಕಾಗಿಯೇ ಹೊಸ ಕಾನೂನು ಜಾರಿಗೊಳಿಸಲಾಗುವುದು ಉದ್ದೇಶದಿಂದ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.